ಸಾಗರದ ಬಳಕೆದಾರರ ವೇದಿಕೆ ಕಳೆದ ೨೦ ವರ್ಷಗಳಿಂದ ಪ್ರಕಟಿಸುತ್ತಿರುವ ‘ಬಳಕೆ ತಿಳುವಳಿಕೆ’ ಮಾಸಿಕದ ನೂತನ ಸಂಪಾದಕನನ್ನಾಗಿ ನನ್ನನ್ನು ನೇಮಿಸಲಾಗಿದೆ. ಈ ಹಿಂದೆ ಇದೇ ಪತ್ರಿಕೆಯ ಸಹಸಂಪಾದಕನಾಗಿ ಕೆಲಸ ಮಾಡಿದ್ದೆ.ಪ್ರಥಮ ಸಂಚಿಕೆಯಿಂದ ಇದರ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಕೆ.ಎನ್.ವೆಂಕಟಗಿರಿರಾವ್ ತೆರವುಗೊಳಿಸಿದ ಸ್ಥಾನಕ್ಕೆ ಇತ್ತೀಚೆಗೆ ಸೇರಿದ್ದ ವೇದಿಕೆಯ ಮಹಾಸಭೆಯಲ್ಲಿ ಉದಯವಾಣಿಯ ಸಾಗರ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿರುವ ನನ್ನನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು.
ಇನ್ನು ಮುಂದೆ ಬಳಕೆ ತಿಳುವಳಿಕೆಯನ್ನು ಓದುಗರು ನೇರವಾಗಿ ಅಂತರ್ಜಾಲ ಬಳಸಿಯೂ ಪ್ರತಿ ತಿಂಗಳು ಓದಬಹುದು. ನೀವು http://balaketiluvalike.blogspot.com/ ವಿಳಾಸದಲ್ಲಿ ಇಣುಕಿದರೆ ಸಾಕು.

2 comments:
Congratulations! ಪತ್ರಿಕೆಗೆ ಖಂಡಿತ ನಿಮ್ಮಿಂದ ಅನುಕೂಲವಾಗಲಿದೆ!
Congratulations. tumba santoshada vishaya.
rgds, Sindhu
200812023996 ಕಾಮೆಂಟ್ ಪೋಸ್ಟ್ ಮಾಡಿ